ರಾಯಸದ ಮಂಚಣ್ಣರಾಯಸದ ಮಂಚಣ್ಣಗಳ ಪುಣ್ಯಸ್ತ್ರೀ ರಾಯಮ್ಮರೇವಣಸಿದ್ಧಯ್ಯಗಳ ಪುಣ್ಯಸ್ತ್ರೀ ರೇಕಮ್ಮಲದ್ದೆಯ ಸೋಮಯ್ಯ/ಲದ್ದೆಯ ಸೋಮವಚನ ಭಂಡಾರಿ ಶಾಂತರಸವೀರಗೊಲ್ಲಾಳವೇದಮೂರ್ತಿ ಸಂಗಣ್ಣವೇಮನ ಮಹಾಕವಿವೈದ್ಯ ಸಂಗಣ್ಣಶಂಕರ ದಾಸಿಮಯ್ಯಶಿವನಾಗಮಯ್ಯಶಿವಲೆಂಕ ಮಂಚಣ್ಣಷಣ್ಮುಖಸ್ವಾಮಿಸಂಗಮೇಶ್ವರ ಅಪ್ಪಣ್ಣಸಕಳೇಸ ಮಾದರಸಸಗರದ ಬೊಮ್ಮಣ್ಣಸತ್ತಿಗೆ ಕಾಯಕದ ಮಾರಯ್ಯಸತ್ಯಕ್ಕಸಿದ್ಧಬುದ್ಧಯ್ಯಗಳ ಪುಣ್ಯಸ್ತ್ರೀ ಕಾಳವ್ವೆಸಿದ್ಧರಾಮ ಶಿವಯೋಗಿಸಿದ್ಧಾಂತಿ ವೀರಸಂಗಯ್ಯಸ್ವತಂತ್ರ ಸಿದ್ಧಲಿಂಗೇಶ್ವರಸುಂಕದ ಬಂಕಣ್ಣಸೂಳೆ ಸಂಕವ್ವೆಸೊಡ್ಡಳ ಬಾಚರಸಹೆಂಡದ ಮಾರಯ್ಯಹಡಪದ ಅಪ್ಪಣ್ಣಹಡಪದ ರೇಚಣ್ಣಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮಹಾದರಕಾಯಕದ ಮಾರಯ್ಯಗಳ ಪುಣ್ಯಸ್ತ್ರೀ ಗಂಗಮ್ಮಹಾವಿನಾಳ ಕಲ್ಲಯ್ಯಹುಂಜಿನ ಕಾಳಗದ ದಾಸಯ್ಯಹೇಮಗಲ್ಲ ಹಂಪಹೊಡೆಹುಲ್ಲ ಬಂಕಣ್ಣಹರಳಯ್ಯ
ಸ್ವತಂತ್ರ ಸಿದ್ಧಲಿಂಗೇಶ್ವರ :👈 👉:ಹಡಪದ ರೇಚಣ್ಣ

ಹಡಪದ ಅಪ್ಪಣ್ಣ

ಹಡಪದ ಅಪ್ಪಣ್ಣ

ಅಂಕಿತ: ಬಸವಪ್ರಿಯ ಕೂಡಲ ಚೆನ್ನಬಸವಣ್ಣ
ಕಾಯಕ: ಹಡಪದ ಕಾಯಕ (ತಾಂಬೂಲ ಕರಂಡ)

ಅಯ್ಯಾ ನಿಮ್ಮ ಶರಣರು ವೇಷವ ತೋರಿ ಗ್ರಾಸವ ಬೇಡುವರಲ್ಲ.
ದೇಶವ ತಿರುಗಿ ಕಲಿತಮಾತ ನುಡಿವರಲ್ಲ.
ಲೇಸಾಗಿ ನುಡಿವರು, ಆಶೆ ಇಲ್ಲದೆ ನಡೆವರು, ರೋಷವಿಲ್ಲದೆ ನುಡಿವರು.
ಹರುಷವಿಲ್ಲದೆ ಕೇಳುವರು, ವಿರಸವಿಲ್ಲದೆ ಮುಟ್ಟುವರು.
ಸರಸವಿದ್ದಲ್ಲಿಯೇ ವಾಸಿಸುವರು.
ಇಂತಪ್ಪ ಬೆರಸಿ ಬೇರಿಲ್ಲದ ನಿಜೈಕ್ಯಂಗೆ ನಮೋ ನಮೋ ಎಂಬೆ,
ಬಸವಪ್ರಿಯ ಕೂಡಲಚೆನ್ನಬಸವಣ್ಣ.
ಇಂತಪ್ಪ ಶರಣರ ನೆಲೆಯ ನಾನೆತ್ತ ಬಲ್ಲೆನಯ್ಯಾ ? /೮೬೧ [1]


ಬಸವಣ್ಣನವರ ಆಪ್ತವಲಯದ ಈತ ತಾಂಬೂಲಕರಂಡ ಕಾಯಕದವನಾಗಿದ್ದ. ಶರಣೆ ಮತ್ತು ವಚನಕಾರ್ತಿ ಲಿಂಗಮ್ಮ ಈತನ ಹೆಂಡತಿ. ಚೆನ್ನಬಸವೇಶ್ವರ ಈತನ ಗುರು. ಕಲ್ಯಾಣಕ್ರಾಂತಿಯ ಸಂದರ್ಭದಲ್ಲಿ ಬಸವಣ್ಣನವರ ಜೊತೆ ಕೂಡಲಸಂಗಮದವರೆಗೂ ಹೋಗುತ್ತಾನೆ. ಅವರ ಅಪ್ಪಣೆಯ ಮೇರೆಗೆ ಕಲ್ಯಾಣಕ್ಕೆ ಹೋಗಿ ನೀಲಮ್ಮನವರನ್ನು ಕರೆತರುವಷ್ಟರಲ್ಲಯೇ ಬಸವಣ್ಣನವರು ಐಕ್ಯರಾದ ಸಂಗತಿ ತಿಳಿಯುತ್ತದೆ. ಆಮೇಲೆ ನೀಲಮ್ಮ ಮತ್ತು ಅಪ್ಪಣ್ಣ ಅವರೂ ಅಲ್ಲಿಯೇ ಲಿಂಗೈಕ್ಯರಾಗುತ್ತಾರೆ.

ಅನ್ನವನ್ನಿಕ್ಕಿದರೇನು ? ಹೊನ್ನ ಕೊಟ್ಟರೇನು ?
ಹೆಣ್ಣು ಕೊಟ್ಟರೇನು ? ಮಣ್ಣು ಕೊಟ್ಟರೇನು ? ಪುಣ್ಯ ಉಂಟೆಂಬರು.
ಅವರಿಂದಾದೊಡವೆ ಏನು ಅವರೀವುದಕ್ಕೆ ?
ಇದಕ್ಕೆ ಪುಣ್ಯವಾವುದು, ಪಾಪವಾವುದು ?
ನದಿಯ ಉದಕವ ನದಿಗೆ ಅರ್ಪಿಸಿ,
ತನತನಗೆ ಪುಣ್ಯ ಉಂಟೆಂಬ ಬಡಹಾರುವರಂತೆ,
ಸದಮಳ ಶಾಶ್ವತ ಮಹಾಘನಲಿಂಗವನರಿಯದೆ,
ಇವೇನ ಮಾಡಿದರೂ ಕಡೆಗೆ ನಿಷ್ಪಲವೆಂದಾತ,
ನಮ್ಮ ಬಸವಪ್ರಿಯ ಕೂಡಲಚೆನ್ನಬಸವಣ್ಣ. /೮೪೬ [1]


ಬನವಾಸಿಯ ಮಧುಕೇಶ್ವರ ದೇವಾಲಯದ ಶಿವೋತ್ಸವ ಮಂಟಪದ ಗಗ್ಗರಿ ಕಲ್ಲಿನ ಮೇಲಿರುವ ಶರಣರ ಶಿಲ್ಪಗಳಲ್ಲಿ ಅಪ್ಪಣ್ಣನ ವಿಗ್ರಹವು ಇದೆ. ಅಪ್ಪಣ್ಣ 'ಬಸವಪ್ರಿಯ ಕೂಡಲಚೆನ್ನಬಸವಣ್ಣ' ಅಂಕಿತದಲ್ಲಿ ಇನ್ನೂರಕ್ಕೂ ಹೆಚ್ಚು ವಚನಗಳನ್ನು ರಚಿಸಿದ್ದಾನೆ. ಅವುಗಳಲ್ಲಿ ಬೆಡಗಿನವು ಅಧಿಕ. ಷಟ್-ಸ್ಥಲ ತತ್ವನಿರೂಪಣೆಗೆ ಆದ್ಯತೆ. ಕೆಲವು ಕಥನಶೈಲಿಯನ್ನು ಅಳವಡಿಸಿಕೊಂಡಿವೆ. ಬೆಡಗಿನ ವಚನಗಳು ಹೆಚ್ಚು ಷಟ್-ಸ್ಥಲ ವಿಷಯ ಪ್ರಧಾನವಾಗಿದೆ. ವಚನಗಳು ಗ್ರಹಿಸಲು ಸುಲಭವಾಗಿವೆ

ಹೊತ್ತುಹೊತ್ತಿಗೆ ಲಿಂಗಪೂಜೆಯ ಮಾಡಿಯೂ
ಮತ್ತೆಯು ಸತ್ಯವಾವುದು, ನಿತ್ಯವಾವುದೆಂದರಿಯದೆ ಕೆಟ್ಟರೆಲ್ಲ ಜಗವು.
ಸತ್ಯವಾಗಿ ನುಡಿವ ಶರಣರ ಕಂಡರೆ, ಕತ್ತೆಮಾನವರೆತ್ತಬಲ್ಲರೊ ?
ಅಸತ್ಯವನೆ ನುಡಿದು, ಹುಸಿಯನೆ ಬೋಧಿಸುವ ಹಸುಕರ ಕಂಡರೆ,
ಇತ್ತ ಬನ್ನಿ ಎಂಬರು.
ಇಂತಪ್ಪ ಅನಿತ್ಯದೇಹಿಗಳ ಭಕ್ತರೆಂದು ಜಂಗಮವೆಂದು
ನೋಡಿದರೆ, ನುಡಿಸಿದರೆ, ಮಾತನಾಡಿದರೆ, ನೀಡಿದರೆ,
ಅಘೋರನರಕವೆಂದು ನಮ್ಮ ಆದ್ಯರ ವಚನ ಸಾರುತಿದೆ,
ಬಸವಪ್ರಿಯ ಕೂಡಲಚೆನ್ನಬಸಣ್ಣಾ . /೧೦೭೮ [1]

ಎನ್ನ ತನು ನಿಮ್ಮ ಸೇವೆಯಲ್ಲಿ ಸವೆದು
ಎನ್ನ ಮನ ನಿಮ್ಮ ನೆನಹಿನಲ್ಲಿ ಸವೆದು
ಎನ್ನ ಅರಿವು ನಿಮ್ಮ ಘನದೊಳಗೆ ಸವೆದು
ನಿಶ್ಚಲ ನಿಜೈಕ್ಯವಾಗಿ ಬಸವ ಪ್ರಿಯ ಕೂಡಲ ಸಂಗಯ್ಯ
ನಾ ನೀನೆಂಬುದು ಏನಾಯಿತ್ತೆಂದರಿಯೆ!

[1] ಈ ತರಹದ ಸಂಖ್ಯೆಯ ವಿವರ: ಸವಸ-5/80 :- ಸಮಗ್ರ ವಚನ ಸಂಪುಟ -5, ವಚನ ಸಂಖ್ಯೆ-80 (೧೫ ಸಮಗ್ರ ವಚನ ಸಂಪುಟಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು)

ಪರಿವಿಡಿ (index)
ಸ್ವತಂತ್ರ ಸಿದ್ಧಲಿಂಗೇಶ್ವರ :👈 👉:ಹಡಪದ ರೇಚಣ್ಣ
*