Previous ಭೋಗಣ್ಣ ಮಡಿವಾಳ ಮಾಚಿದೇವರ ಸಮಯಾಚಾರದ ಮಲ್ಲಿಕಾರ್ಜುನ Next

ಮಡಿವಾಳ ಮಾಚಿದೇವ

*

ಮಡಿವಾಳ ಮಾಚಿದೇವ

ಅಂಕಿತ: ಕಲಿದೇವರದೇವ
ಕಾಯಕ: ಬಟ್ಟೆ ತೊಳೆಯುವ ಕಾಯಕ (ಅಗಸ)

Madivala Machideva ಮಡಿವಾಳ ಮಾಚಿದೇವ

ಆ ಜಾತಿ ಈ ಜಾತಿಯವರೆನಬೇಡ.
ಹದಿನೆಂಟುಜಾತಿಯೊಳಗಾವ ಜಾತಿಯಾದಡೂ ಆಗಲಿ,
ಗುರು ಕಾರುಣ್ಯವ ಪಡೆದು, ಅಂಗದ ಮೇಲೆ ಲಿಂಗವ ಧರಿಸಿ,
ಪುನರ್ಜಾತರಾದ ಬಳಿಕ, ಭಕ್ತರಾಗಲಿ ಜಂಗಮವಾಗಲಿ,
ಗುರುವಿನ ವೇಷವಿದ್ದವರ ಗುರುವೆಂದು ನಂಬಿ,
ದಾಸೋಹವ ಮಾಡುವುದೆ ಸದಾಚಾರ.
ಗುರುವನತಿಗಳೆದು, ಗುರುವಾಜ್ಞೆಯ ಮೀರಿ,
ಗುರು ಕೊಟ್ಟ ಪಂಚಮುದ್ರೆಗಳ ಮೇಲೆ
ಅನ್ಯಸಮಯ ಮುದ್ರೆಯ ಲಾಂಛನಾಂಕಿತರಾಗಿ,
ಗುರುದ್ರೋಹಿಗಳಾಗಿ ಬಂದವರ
ಜಂಗಮವೆಂದು ಕಂಡು, ನಮಸ್ಕರಿಸಿ ಆರಾಧಿಸಿ,
ಪ್ರಸಾದವ ಕೊಂಡವಂಗೆ ನಾಯಕನರಕ ತಪ್ಪದೆಂದ
ಕಲಿದೇವಯ್ಯ./೪೯೩ [1]

ವೀರನಿಷ್ಠೆಯ ಶರಣನೀತ. ವಿಜಾಪುರ ಜಿಲ್ಲೆಯ ಸಿಂಧಗಿ ತಾಲೂಕಿನ 'ದೇವರ ಹಿಪ್ಪರಗಿಯಲ್ಲಿ' ಪರುವತಯ್ಯ -ಸುಜ್ನಾನವ್ವ ದಂಪತಿಗಳ ಪುತ್ರ ರತ್ನ -ಶರಣ ಕಿರಣ ಮಡಿವಾಳ ಮಾಚಿದೆವರು. ದೇವರ ಹಿಪ್ಪರಿಗೆ ಈತನ ಜನ್ಮಸ್ಥಳ. ಕಾರ್ಯಕ್ಷೇತ್ರ ಕಲ್ಯಾಣ. ಆರಾಧ್ಯದೈವ ಕಲ್ಲಿನಾಥ. ಕಾವ್ಯ ಪುರಾಣಗಳಲ್ಲಿ ಈತನನ್ನು ವೀರಭದ್ರನ ಅವತಾರವೆಂದು ಬಣ್ಣಿಸಲಾಗಿದೆ. ಶಾಸನ ಶಿಲ್ಪಗಳಲ್ಲಿಯೂ ಇವನಿಗೆ ಎಡೆ ಲಭಿಸಿದೆ. ಶರಣರ ಬಟ್ಟೆಗಳನ್ನು ತೊಳೆಯುವುದು (ಶುಚಿ ಮಾಡುವುದು) ಈತನ ಕಾಯಕ.
ಮಡಿವಾಳ ಮಾಚಿದೇವರ ಬಗ್ಗೆ ಹಲವು ಐತಿಹ್ಯಗಳು ಪ್ರಚಾರದಲಿ ಇವೆ. ಅವುಗಳಲ್ಲಿ ಕೆಲವು-

ಮೊದಲನೆಯ ಪ್ರಸಂಗ

ನುಲಿಯ ಚಂದಯ್ಯ ತನ್ನ ಕಾಯಕಕ್ಕೆ ಬೇಕಾದ ಹುಲ್ಲನ್ನು ಕೆರೆಯಲ್ಲಿ ಕುಯ್ಯುತ್ತಿದ್ದಾಗ ಧರಿಸಿದ 'ಇಷ್ಟ ಲಿಂಗ ' ಜಾರಿ ಕೆರೆಯೊಳಗೆ ಬೀಳುತ್ತದೆ. ಜಾರಿ ಬಿದ್ದ ಲಿಂಗ ಮತ್ತೇಕೆ? ಭಾವ ಲಿಂಗವೊಂದನ್ನೇ ಪೂಜಿಸಿದರೆ ಸಾಕೆಂದು ಹುಲ್ಲಿನ ಹೊರೆ ಹೊತ್ತು ಮನೆಗೆ ಮರಳುವನು. ಆಗ ಲಿಂಗದೇವ, ಮಾಚಿದೇವರ ಮೊರೆ ಹೋಗುತ್ತಾನೆ. ಮಾಚಿ ತಂದೆಗಳು 'ಸವಿ ಬೇಕು- ಹಣ್ಣು ಬೇಡವೆಂದರೆ' ಹೇಗೆ? ಗುರು ಪೂಜೆ ಅರಿದೊಡೆ ಲಿಂಗ ಪೂಜೆ ಬಿಡಲಾಗದೆಂದು ಚಂದ್ರಯ್ಯನವರ ತಪ್ಪನ್ನು ಅರಿವನ್ನುಂಟುಮಾಡುವರು - ಅದೊಂದು ದಿವ್ಯ ಪ್ರಸಂಗ.

ಎರಡನೆಯ ಪ್ರಸಂಗ

'ಬೇಡುವ ಭಕ್ತರಿಲ್ಲದೆ ಬಡವನಾದೆನೆಂಬ' ಬಸವಣ್ಣನವರು 'ಅಹಂ' ಭಾವನೆಯಿಂದ ಮಾತನಾಡಿರುತ್ತಾರೆ, ಆಗ ಮಾಚಿದೆವರು ಬಸವಣ್ಣನವರಿಗೆ ' ನೀವೊಬ್ಬರೇ ದಾನ ಮಾಡಲು ಹುಟ್ಟಿದ ದಾನಿಗಳು , ಉಳಿದೆಲ್ಲ ಭಕ್ತರು ಭಿಕಾರಿಗಳು, ದರಿದ್ರರೆ' ? ಎಂದು ಪ್ರಶ್ನಿಸುತ್ತಾರೆ. ಮುಂದೆ ಎನ್ನ ಮಹಾನುಭಾವರ ಬಡತನದಿರವ ನಿನಗೆ ತೋರುವೆನೆಂದು ಪಾದದಿಂದ ನೀರನ್ನು ಚಿಮ್ಮಲು ಆ ನೀರು ಹನಿಗಳೆಲ್ಲ ಮುತ್ತು ರತ್ನಗಳಾದವು. ಹೀಗೆ ವಿನಯ, ಇಂದ್ರಿಯ ನಿಗ್ರಹ, ನಿರಹಂಕಾರಗಳು ಭಕ್ತಿಯ ಕುರುಹು ಎಂದು ತಿಳಿಸುತ್ತ ಅಹಂಕಾರ ನಿರ್ಮೂಲನೆಗೊಳಿಸಿದ.

ಮೂರನೆಯ ಪ್ರಸಂಗ

ಮತ್ತೊಂದು ಸಂದರ್ಭದಲ್ಲಿ ಮೇದರ ಕೇತಯ್ಯ ಬಿದಿರು ಕಡಿಯುವಾಗ ಕೆಳಗೆ ಬೀಳುತ್ತಾನೆ. ಎದೆಗೆ ಬಿದಿರು ಮೊಳೆ ಚುಚ