ರಚನೆ: ವೀರ ವೀರಾಗಿಣಿ ಅಕ್ಕಮಹಾದೇವಿ
ಒಲ್ಲೆ ಗಂಡನ ಕೂಟ ಒಗೆತನವ
ಅಕ್ಕಟ ಗಂಡನ ಮನೆಯ ಬಿರಿಸಯ್ಯಯ್ಯೋ! |ಪಲ್ಲವಿ|
ಒಡಕು ಗಂಗಳದಲ್ಲಿ ನೀರಂಬಲಿಯ ನೀಡಿ
ಹೊಡೆದಳು ನಮ್ಮತ್ತೆ ಮೊರದಲ್ಲಿ
ಕಡುದುಃಖದಿಂದ ನಾ ಒಲೆಯ ಮುಂದೆ ಕುಳಿತಿರೆ
ಕೊಡಿತನದಿ ಬಂದು ಒದ್ದಳಯ್ಯಯ್ಯೋ! |೧|
ನೆತ್ತಿಗೆಣ್ಣೆಯಿಲ್ಲದೆ ತಲೆ ಬತ್ತಿಗಟ್ಟಿತು
ವೃತ್ತಜವ್ವನ ಬಾಡಿಹೋದವಲ್ಲ!
ಅತ್ತೆಯಾಸೆಯಿಲ್ಲ ಮಾವನ ಲೇಸಿಲ್ಲ
ಚಿತ್ತವಲ್ಲಭನಲ್ಲಿ ಗಣವಿಲ್ಲವಯ್ಯಯ್ಯೋ! |೨|
ಹೇಳಿ ಕಳುಹುವೆ ನಾನವ್ವೆಗಳೂರಿಗೆ
ಕೇಳಯ್ಯ ಶ್ರೀಶೈಲ ಮಲ್ಲಿಕಾರ್ಜುನ
ಭಾಳಪಾಪಿಗಳಲ್ಲಿ ಕೊಟ್ಟರಯ್ಯಯ್ಯೋ! |೩|
ಗ್ರಂಥ ಋಣ:
1. ಡಾ. ಎಲ್. ಬಸವರಾಜು ಸಂಪಾದಿತ “ಶಿವದಾಸ ಗೀತಾಂಜಲಿ”
2. ಕೆ. ರವೀಂದ್ರನಾಥ ಸಂಪಾದಿತ “ಬಸವಯುಗದ ವಚನೇತರ ಸಾಹಿತ್ಯ”