Previous ಏನೇನೆಂಬೆ ಎನ್ನೊಗೆತನವ ಮದನನೆಸುಗೆಯಿಂದ ಮುನ್ನ ಚೆನ್ನಮಲ್ಲನ Next

ತ್ರಿಭುವನ ಹೆಂಡಿರ ನೀರ ಹೊಳೆಯಲ್ಲಿರಿಸಿತ್ತು

ರಚನೆ: ವೀರ ವೀರಾಗಿಣಿ ಅಕ್ಕಮಹಾದೇವಿ


ಹಸಿದ ಹಸುಳೆಗೆರೆದೆಯಾಹ
ವಿಷವ, ರಾಜಹಂಸೆಗುಕ್ಕು
ರಸವನೀಂಟಿಸಿದೆ, ಮಹೇಶ, ನೋಳ್ಪ ಕಣ್ಣೊಳು
ಕಸವ ಕವಿದೆ, ಕರ್ಣಗಳಿಗೆ
ದಸಿಯ ಬಡಿದೆ; ಕರುಣವಿಲ್ಲ-
ದಸಮಪಾತಕವನು ಎನಗೆ ಕೇಳಿಸಿಂದು ನೀ |೧|

ಹರನೆ, ಕಣ್ಣೊಳುರಿಯನ್ನಿಟ್ಟ
ದುರುಳ, ನಂಜುಗೊರಲ, ಸರ್ಪ
ಧರ ತ್ರಿಶೂಲಿ! ನಿನ್ನ ನಂಬಿದವರನಸಿಯೊಳು
ಅರೆದು ಸಣ್ಣಿಸುವುದೆ ನಿನ್ನ
ಕರುಣವಲ್ಲದದೆಲ್ಲರಂತೆ
ಕರುಣಿಯೆಂಬ ಮರುಳನಾವ ?! ಮಗನ ಕೊಲಿಸಿರೇ? |೨|

ಯತಿಯ ರಸಿಕನೆನಿಸಿ, ಪತಿ-
ವ್ರತೆಯ ಸಿತಗೆಯೆನಿಸಿ, ದಿವ್ಯ-
ಮತಿಗೆ ಸಟೆಯ ಬಿತ್ತಿ, ದಾನಿ-
ಗತಿದರಿದ್ರದೆಡರನೀವ
ಮತವೆ ನಿನ್ನದುತ್ತಮಿಕೆಯ ನೆರೆವ ತಪ್ಪೆಯ? |೩|

ಅರಗಿಲೆರೆದ ಬೊಂಬೆಗುರಿಯ
ಭರಣವನ್ನು ತೊಡಿಸಲಹುದೆ?!
ಹರನೆ ನಿನ್ನ ಸ್ತೋತ್ರವಲ್ಲದನ್ಯವರಿಯದ
ತರಳೆಯೆನ್ನ ಕಿವಿಯೊಳೆನ್ನ
ಪುರುಷವಚನವನ್ನು ತುಂಬೆ
ಕರುಣವಿಲ್ಲಲಾ ಕಪರ್ದಿ... |೪|

ಗಂಡನುಳ್ಳ ಹೆಣ್ಣನಾವ
ಗಂಡು ಬಯಸಿ ಕೇಳ್ದಡವನ
ತುಂಡುಗಡಿಯದಿಹನೆಯವಳ ಗಂಡನೆನ್ನಯ
ಗಂಡ ನೀನಿರಲ್ಕೆ ಕೇಳ್ದೊ
ಡಂಡುಗೊಂಡು ಸುಮ್ಮನಿಹೆ! ಶಿ-
ಖಂಡಿಯೆಂಬ ನಾಮ ಸಾಮ್ಯವಾದುದಿಂದಲಿ |೫|

ಗ್ರಂಥ ಋಣ:
1. ಡಾ. ಎಲ್. ಬಸವರಾಜು ಸಂಪಾದಿತ “ಶಿವದಾಸ ಗೀತಾಂಜಲಿ”
2. ಕೆ. ರವೀಂದ್ರನಾಥ ಸಂಪಾದಿತ “ಬಸವಯುಗದ ವಚನೇತರ ಸಾಹಿತ್ಯ”

ಪರಿವಿಡಿ (index)
Previous ಏನೇನೆಂಬೆ ಎನ್ನೊಗೆತನವ ಮದನನೆಸುಗೆಯಿಂದ ಮುನ್ನ ಚೆನ್ನಮಲ್ಲನ Next