ತನುವಿನ ಕೋಪ ತನ್ನ ಹಿರಿಯತನದ ಕೇಡು
ತನುವಿನ ಕೋಪ ತನ್ನ ಹಿರಿಯತನದ ಕೇಡು, ಮನೆಯೋಳಗಿನ ಬೆಂಕಿಯು ತನ್ನ ಮನೆಯನ್ನು ಸುಡುವಂತೆ, ಕೋಪವು ಸ್ವತ: ತನ್ನನ್ನು ಆಶ್ರಯಿಸಿದ ದೇಹವನ್ನೆ ಸುಡುತ್ತದೆ, ಇದನ್ನೆ ಗುರು ಬಸವಣ್ಣನವರು ಇಲ್ಲಿ ತಿಳಿಯಪಡಿಸುತ್ತಾರೆ.
ತನಗೆ ಮುನಿವರಿಗೆ ತಾ ಮುನಿಯಲೇಕಯ್ಯಾ
ತನಗಾದ ಆಗೇನು ಅವರಿಗಾದ ಚೇಗೆಯೇನು
ತನುವಿನ
ಕೋಪ ತನ್ನ ಹಿರಿಯತನದ ಕೇಡು.
ಮನದ ಕೋಪ ತನ್ನ ಅರಿವಿನ ಕೇಡು.
ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲಸಂಗಮದೇವಾ. ೧/೨೪೮
[1]
ತನಗೊಬ್ಬರು ಮುನಿದರು ತಾನಾರಿಗೂ ಮುನಿಯಲಾಗದು.
ಮನೆಯ ಕಿಚ್ಚು ಮೊದಲೊಮ್ಮೆ ಮನೆಯ ಸುಡುವಂತೆ
ತನ್ನ
ಕೋಪ ತನ್ನನೆ ಸುಡುವುದು ನೋಡಯ್ಯ.
ಸವಿಮಾತುಗಳು ಬೇಗದಿಂದ ಆ ಕ್ರೋಧವ [ಗೆಲಿದಿರ್ಪುದು]
ಆ ಕ್ರೋಧ ದುರ್ಜನರ ಗೆಲುವುದು.
ಇಂತೀ ಸೋತುದಕ್ಕೆ ಸೋತವರ ಕೂಡೆ
ಎತ್ತಣ ವಿರೋಧವಯ್ಯ?
ಸೌರಾಷ್ಟ್ರ ಸೋಮೇಶ್ವರನ ಶರಣರು
ಸಚರಾಚರಪ್ರಾಣಿಗಳಲ್ಲಿ ವಿರೋಧವಿಲ್ಲದಿರಬೇಕು. /೯೪೦
ಕಾಮ, ಕ್ರೋಧ, ಲೋಭ ಮತ್ತು ಮೋಹವನ್ನು ಬಿಟ್ಟರೆ ಮಾತ್ರ ದೇವರ ಸಾಕ್ಷಾತ್ಕಾರ ಸಾಧ್ಯ.
ಕಾಮದ ಸೀಮೆಯ ಕಳೆಯದನ್ನಕ್ಕ,
ಕೋಪದ ಕೂಪ ಹೂಳದನ್ನಕ್ಕ,
ಲೋಭದ ಲಾಭ ಕ್ಷಯಿಸದನ್ನಕ್ಕ, ಮೋಹದ ಗಾಯ ನಂದದನ್ನಕ್ಕ,
ಮದದುನ್ಮದ ಕೆದರದನ್ನಕ್ಕ, ಮಚ್ಚರದ ಕೆಚ್ಚು ಬಿಚ್ಚದನ್ನಕ್ಕ,
ಅರಿಗಳಾರತವಡಗಿ ನಿರುತವಾಗದನ್ನಕ್ಕ,
ಸೌರಾಷ್ಟ್ರ ಸೋಮೇಶ್ವರಲಿಂಗವೆಂತು ಸಾಧ್ಯವಪ್ಪುದಯ್ಯಾ? /೮೭೦
ನಾ ಹುಟ್ಟಿದಲ್ಲಿ ಸಂಸಾರ ಹುಟ್ಟಿತ್ತು.
ಸಂಸಾರ ಹುಟ್ಟಿದಲ್ಲಿ ಅಜ್ಞಾನ ಹುಟ್ಟಿತ್ತು.
ಅಜ್ಞಾನ ಹುಟ್ಟಿದಲ್ಲಿ ಆಶೆ ಹುಟ್ಟಿತ್ತು.
ಆಶೆ ಹುಟ್ಟಿದಲ್ಲಿ
ಕೋಪ ಹುಟ್ಟಿತ್ತು.
ಆ
ಕೋಪಾಗ್ನಿಯ ತಾಮಸಧೂಮ್ರ ಮುಸುಕಿದಲ್ಲಿ
ನಾ ನಿಮ್ಮ ಮರೆದು ಭವದುಃಖಕ್ಕೀಡಾದೆ.
ನೀ ಕರುಣದಿಂದೆತ್ತಿ ಎನ್ನ ಮರಹ ವಿಂಗಡಿಸಿ
ನಿಮ್ಮ ಪಾದವನರುಹಿಸಯ್ಯಾ, ಚೆನ್ನಮಲ್ಲಿಕಾರ್ಜುನಾ. /೨೫೬
ಬೆಟ್ಟದ ಮೇಲೊಂದು ಮನೆಯ ಮಾಡಿ,
ಮೃಗಗಳಿಗಂಜಿದಡೆಂತಯ್ಯಾ ?
ಸಮುದ್ರದ ತಡಿಯಲೊಂದು ಮನೆಯ ಮಾಡಿ,
ನೊರೆತೆರೆಗಳಿಗಂಜಿದಡೆಂತಯ್ಯಾ ?
ಸಂತೆಯೊಳಗೊಂದು ಮನೆಯ ಮಾಡಿ,
ಶಬ್ದಕ್ಕೆ ನಾಚಿದಡೆಂತಯ್ಯಾ ?
ಚೆನ್ನಮಲ್ಲಿಕಾರ್ಜುನದೇವ ಕೇಳಯ್ಯಾ,
ಈ ಲೋಕದೊಳಗೆ ಹುಟ್ಟಿದ ಬಳಿಕ ಸ್ತುತಿನಿಂದೆಗಳು ಬಂದಡೆ
ಮನದಲ್ಲಿ
ಕೋಪವ ತಾಳದೆ ಸಮಾಧಾನಿಯಾಗಿರಬೇಕು. /೩೦೭
ಕೋಪಿ ಮಜ್ಜನಕ್ಕೆರೆದಡೆ ರಕ್ತದ ಧಾರೆ,
ಪಾಪಿ ಹೂವನೇರಿಸಿದಡೆ ಮಸೆದಡ್ಡಾಯುಧದ ಗಾಯ.
ಕೂಪವರನಾರನೂ ಕಾಣೆನು ಮಾದಾರ ಚೆನ್ನಯ್ಯನಲ್ಲದೆ,
ಕೂಪವರನಾರನೂ ಕಾಣೆನು ಡೋಹರ ಕಕ್ಕಯ್ಯನಲ್ಲದೆ,
ವ್ಯಾಪ್ತಿಯುಳ್ಳವ ನಮ್ಮ ಮಡಿವಾಳ ಮಾಚಯ್ಯ.
ನಿನ್ನಪತ್ತಿಗರಿವರಯ್ಯಾ, ಕೂಡಲಸಂಗಯ್ಯಾ. ೧/೬೫೦
[1]
[1] ಈ ತರಹದ ಸಂಖ್ಯೆಯ ವಿವರ: ಸವಸ-1/554 :- ಸಮಗ್ರ ವಚನ ಸಂಪುಟ -1, ವಚನ ಸಂಖ್ಯೆ-554 (೧೫ ಸಮಗ್ರ ವಚನ ಸಂಪುಟಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು)