ದೇವರು ಒಬ್ಬನೆ - ಏಕ ದೇವೋಪಾಸನೆ Lingayat Monotheism :👈 👉:ಲೋಕವಿರೋಧಿ ಶರಣನಾರಿಗಂಜುವನಲ್ಲ,

ಲಿಂಗಾಯತರಲ್ಲಿ ಪ್ರತಿಯೊಬ್ಬರು ಲಿಂಗಪೂಜೆ ಮಾಡಬೇಕು

ತನ್ನಾಶ್ರಯದ ರತಿಸುಖವನು, ತಾನುಂಬ ಊಟವನು, ಬೇರೆ ಮತ್ತೊಬ್ಬರ ಕೈಯಲ್ಲಿ ಮಾಡಿಸಬಹುದೆ?

ತನ್ನಾಶ್ರಯದ ರತಿಸುಖವನು, ತಾನುಂಬ ಊಟವನು
ಬೇರೆ ಮತ್ತೊಬ್ಬರ ಕೈಯಲ್ಲಿ ಮಾಡಿಸಬಹುದೆ?
ತನ್ನ ಲಿಂಗಕ್ಕೆ ಮಾಡುವ ನಿತ್ಯ ನೇಮವ ತಾಮಾಡಬೇಕಲ್ಲದೆ
ಬೇರೆ ಮತೊಬ್ಬರ ಕೈಯಲ್ಲಿಮಾಡಿಸಬಹುದೆ?
ಕೆಮ್ಮನೆ ಉಪಚಾರಕ್ಕೆ ಮಾಡುವರಲ್ಲದೆ
ನಿಮ್ಮನೆತ್ತಬಲ್ಲರು,ಕೂಡಲಸಂಗಮದೇವಾ - ಬಸವಣ್ಣ ಸವಸ-1/183[1]

ಹಸಿವಾದಡುಂಬುದನು, ಸತಿಯ ಸಂಭೋಗವನು
ಆನಾಗಿ ನೀ ಮಾಡೆಂಬವರುಂಟೆ
ಮಾಡುವುದು, ಮಾಡುವುದು ಮನಮುಟ್ಟಿ,
ಮಾಡುವುದು, ಮಾಡುವುದು ತನುಮುಟ್ಟಿ,
ತನುಮುಟ್ಟಿ ಮನಮುಟ್ಟದಿರ್ದಡೆ
ಕೂಡಲಸಂಗಮದೇವನೇತರಲ್ಲಿಯೂ ಮೆಚ್ಚ. - ಬಸವಣ್ಣ ಸವಸ-1/182[1]

ಸತಿಯರ ಸಂಗವನು ಅತಿಶಯ ಗ್ರಾಸವನು
ಪೃಥ್ವಿಗೀಶ್ವರನ ಪೂಜೆಯನು
ಅರಿವುಳ್ಳಡೆ ಹೆರರ ಕೈಯಿಂದ ಮಾಡಿಸುವರೆ! ರಾಮನಾಥ. - ಜೇಡರ ದಾಸಿಮಯ್ಯ

[1] ಈ ತರಹದ ಸಂಖ್ಯೆಯ ವಿವರ: ಸವಸ-1/183 :- ಸಮಗ್ರ ವಚನ ಸಂಪುಟ-೧, ವಚನ ಸಂಖ್ಯೆ-183 (೧೫ ಸಮಗ್ರ ವಚನ ಸಂಪುಟಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು)

ಪರಿವಿಡಿ (index)
ದೇವರು ಒಬ್ಬನೆ - ಏಕ ದೇವೋಪಾಸನೆ Lingayat Monotheism :👈 👉:ಲೋಕವಿರೋಧಿ ಶರಣನಾರಿಗಂಜುವನಲ್ಲ,