Previous ತ್ರೈಲೋಚನ ಮನೋಹರ ಮಾಣಿಕೇಶ್ವರಲಿಂಗ ದೇವಧ್ವಜ ಮೃತ್ಯುಂಜಯನ ಭಾವದೊಲ್ಲಭ ಮುದ್ದನೂರೇಶ Next

ದುಗ್ಗಳೆ

*

ದುಗ್ಗಳೆ ವಚನಗಳು

785
ಬಸವಣ್ಣನಿಂದ ಗುರುಪ್ರಸಾದಿಯಾದೆನು.
ಚೆನ್ನಬಸವಣ್ಣನಿಂದ ಲಿಂಗಪ್ರಸಾದಿಯಾದೆನು.
ಪ್ರಭುದೇವರಿಂದ ಜಂಗಮಪ್ರಸಾದಿಯಾದೆನು.
ಮರುಳಶಂಕರದೇವರಿಂದ ಮಹಾಪ್ರಸಾದಿಯಾದೆನು.
ಇಂತೀ ಚತುರ್ವಿಧವು ಏಕೀಭವಿಸಿ ಪ್ರಾಣಲಿಂಗವಾದ
ಮಹಾಮಹಿಮಂಗೆ ಶರಣೆಂದು ಬದುಕಿದೆನಯ್ಯಾ
ದಾಸಯ್ಯಪ್ರಿಯ ರಾಮನಾಥ.

786
ಭಕ್ತನಾದಡೆ ಬಸವಣ್ಣನಂತಾಗಬೇಕು.
ಜಂಗಮವಾದಡೆ ಪ್ರಭುದೇವರಂತಾಗಬೇಕು.
ಯೋಗಿಯಾದಡೆ ಸಿದ್ಧರಾಮಯ್ಯನಂತಾಗಬೇಕು.
ಭೋಗಿಯಾದಡೆ ಚೆನ್ನಬಸವಣ್ಣನಂತಾಗಬೇಕು.
ಐಕ್ಯನಾದಡೆ ಅಜಗಣ್ಣನಂತಾಗಬೇಕು.
ಇಂತಿವರ ಕಾರುಣ್ಯಪ್ರಸಾದವ ಕೊಂಡು
ಸತ್ತಹಾಗಿರಬೇಕಲ್ಲದೆ ತತ್ವದ ಮಾತು ಎನಗೇಕಯ್ಯಾ
ದಾಸಯ್ಯಪ್ರಿಯ ರಾಮನಾಥಾ ?

ಗ್ರಂಥಋಣ: ಸಮಗ್ರ ವಚನ ಸಂಪುಟಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು

*
Previous ತ್ರೈಲೋಚನ ಮನೋಹರ ಮಾಣಿಕೇಶ್ವರಲಿಂಗ ದೇವಧ್ವಜ ಮೃತ್ಯುಂಜಯನ ಭಾವದೊಲ್ಲಭ ಮುದ್ದನೂರೇಶ Next